ಡಿವೈಎಸ್​ಪಿ ಗಣಪತಿ ಆತ್ಮಹತ್ಯೆ ಪ್ರಕರಣ; ಕೆ.ಜೆ. ಜಾರ್ಜ್​ಗೆ ಮತ್ತೆ ಸಮನ್ಸ್​ ಜಾರಿ

DySP Ganapathi Death: ಡಿವೈಎಸ್​ಪಿ ಗಣಪತಿ ಆತ್ಮಹತ್ಯೆ ಪ್ರಚೋದನೆಗೆ ಸಾಕಷ್ಟು ಸಾಕ್ಷಿಗಳಿದ್ದರೂ ಸಿಬಿಐ ಬಿ ರಿಪೋರ್ಟ್ ನೀಡಿರುವುದಕ್ಕೆ ಕೋರ್ಟ್​ ಅಸಮಾಧಾನ ವ್ಯಕ್ತಪಡಿಸಿದೆ. ಈ ಪ್ರಕರಣದ ವಿಚಾರಣೆಯನ್ನು ಸೆಪ್ಟೆಂಬರ್ 28ಕ್ಕೆ ಮುಂದೂಡಲಾಗಿದ್ದು, ಕೆ.ಜೆ.ಜಾರ್ಜ್, ಪ್ರಣಬ್ ಮೊಹಾಂತಿ, ಎ.ಎಂ.ಪ್ರಸಾದ್ ಅವರಿಗೆ ಸಮನ್ಸ್ ನೀಡಲಾಗಿದೆ.

news18-kannada
Updated:August 28, 2020, 1:05 PM IST
ಡಿವೈಎಸ್​ಪಿ ಗಣಪತಿ ಆತ್ಮಹತ್ಯೆ ಪ್ರಕರಣ; ಕೆ.ಜೆ. ಜಾರ್ಜ್​ಗೆ ಮತ್ತೆ ಸಮನ್ಸ್​ ಜಾರಿ
ಕೆ.ಜೆ. ಜಾರ್ಜ್ -ಡಿವೈಎಸ್​ಪಿ ಗಣಪತಿ
  • Share this:
ಬೆಂಗಳೂರು (ಆ. 28): ಡಿವೈಎಸ್​ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಜೆ. ಜಾರ್ಜ್​ಗೆ ಮತ್ತೆ ಸಂಕಷ್ಟ ಎದುರಾಗಿದೆ. ಈ ಪ್ರಕರಣದ ತನಿಖೆ ನಡೆಸಿದ್ದ ಸಿಬಿಐ ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಇಂದು ಜನಪ್ರತಿನಿಧಿಗಳ ವಿರುದ್ಧದ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ.

ನ್ಯಾಯಾಧೀಶ ತ್ಯಾಜರಾಜ್ ಎನ್. ಇನವಳ್ಳಿ ಸಿಬಿಐ ಸಲ್ಲಿಸಿದ್ದ ಬಿ ರಿಪೋರ್ಟ್​ ಅನ್ನು ತಿರಸ್ಕರಿಸಿದ್ದಾರೆ. ಈ ಪ್ರಕರಣದ ಆರೋಪಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ನೀಡಿದ್ದಾರೆ. ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ಕೆ.ಜೆ ಜಾರ್ಜ್, ಐಪಿಎಸ್ ಅಧಿಕಾರಿಗಳಾದ ಪ್ರಣವ್ ಮೊಹಂತಿ ಮತ್ತು ಎ.ಎಂ ಪ್ರಸಾದ್ ಅವರಿಗೆ ಕೋರ್ಟ್​ ನೋಟೀಸ್ ನೀಡಿದೆ.

ಡಿವೈಎಸ್​ಪಿ ಗಣಪತಿ ಆತ್ಮಹತ್ಯೆ ಪ್ರಕರಣ ರಾಜ್ಯದ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿತ್ತು. ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿತ್ತು. ಸಿಬಿಐ ಈ ಪ್ರಕರಣದ ತನಿಖೆ ನಡೆಸಿ ಬಿ ರಿಪೋರ್ಟ್ ಸಲ್ಲಿಸಿತ್ತು. ಇದನ್ನು ಪ್ರಶ್ನಿಸಿ ಗಣಪತಿ ಅವರ ಪುತ್ರ ನೆಹಾಲ್ ಗಣಪತಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣದ ವಾದ- ಪ್ರತಿವಾದ ಆಲಿಸಿದ ನ್ಯಾಯಾಪೀಠ ಸಿಬಿಐ ಸಲ್ಲಿಸಿದ್ದ ಬಿ ರಿಪೋರ್ಟ್​ ಅನ್ನು ತಿರಸ್ಕರಿಸಿದೆ. ಈ ಮೂಲಕ ಮಾಜಿ ಸಚಿವ ಕೆ.ಜೆ.ಚಾರ್ಜ್, ಎ.ಎಂ ಪ್ರಸಾದ್, ಪ್ರಣಬ್ ಮೊಹಾಂತಿಗೆ ಮತ್ತೆ ಸಂಕಷ್ಟ ಎದುರಾಗಿದೆ.

ಇದನ್ನೂ ಓದಿ: ಇನ್ಫೋಸಿಸ್ ಅಧ್ಯಕ್ಷರಿಗೆ ವಿಶಿಷ್ಟ ಗೌರವ - ಬನ್ನೇರುಘಟ್ಟ ಪಾರ್ಕ್ ಆನೆ ಮರಿಗೆ ಸುಧಾಮೂರ್ತಿ ಹೆಸರು ನಾಮಕರಣ

ಗಣಪತಿ ಅವರ ಸಾವಿನ ಪ್ರಕರಣದಲ್ಲಿ ಸಿಬಿಐ ಬಿ ರಿಪೋರ್ಟ್​ ಸಲ್ಲಿಸಿರುವುದಕ್ಕೆ ವಿಶೇಷ ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದೆ. ಆತ್ಮಹತ್ಯೆ ಪ್ರಚೋದನೆಗೆ ಸಾಕಷ್ಟು ಸಾಕ್ಷಿಗಳಿದ್ದರೂ ಬಿ ರಿಪೋರ್ಟ್ ನೀಡಿರುವುದಕ್ಕೆ ಕೋರ್ಟ್​ ಅಸಮಾಧಾನ ವ್ಯಕ್ತಪಡಿಸಿದೆ. ಈ ಪ್ರಕರಣದ ವಿಚಾರಣೆಯನ್ನು ಸೆಪ್ಟೆಂಬರ್ 28ಕ್ಕೆ ಮುಂದೂಡಲಾಗಿದೆ. ಕೆ.ಜೆ.ಜಾರ್ಜ್, ಪ್ರಣಬ್ ಮೊಹಾಂತಿ, ಎ.ಎಂ.ಪ್ರಸಾದ್ ಅವರಿಗೆ ಸಮನ್ಸ್ ಜಾರಿಗೊಳಿಸಲಾಗಿದೆ.

ಏನಿದು ಪ್ರಕರಣ?:
ಮಂಗಳೂರಿನ ಐಜಿಪಿ ಕಚೇರಿಯಲ್ಲಿ ಡಿವೈಎಸ್‌ಪಿ ಆಗಿದ್ದ ಕೊಡಗು ಮೂಲದ ಎಂ.ಕೆ. ಗಣಪತಿ 2016ರ ಜುಲೈ 7ರಂದು ಮಡಿಕೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಕೊಡಗಿನ ಸ್ಥಳೀಯ ಖಾಸಗಿ ವಾಹಿನಿಗೆ ನೀಡಿದ್ದ ಸಂದರ್ಶನದಲ್ಲಿ ‘ಕೆ.ಜೆ.ಜಾರ್ಜ್ ಹಾಗೂ ಇಬ್ಬರು ಐಪಿಎಸ್ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ. ನಾನು ಸಾವನ್ನಪ್ಪಿದ್ದರೆ ಅದಕ್ಕೆ ಈ ಮೂವರೇ ಕಾರಣ’ ಎಂದು ಹೇಳಿದ್ದರು. ಅದೇ ದಿನ ಸಂಜೆ ಅವರು ಲಾಡ್ಜ್​ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರ ಸಾವಿನ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಮುಖಂಡರು ಆಗ ಗೃಹ ಸಚಿವರಾಗಿದ್ದ ಕೆ.ಜೆ. ಜಾರ್ಜ್‌ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಸಾಕಷ್ಟು ಪ್ರತಿಭಟನೆಗಳು ನಡೆದು, ಕೊಡಗು ಬಂದ್‌ ಘೋಷಿಸಲಾಗಿತ್ತು. ವಿಪಕ್ಷಗಳು ಕೆ.ಜೆ. ಜಾರ್ಜ್‌ ರಾಜೀನಾಮೆಗೆ ಪಟ್ಟು ಹಿಡಿದ ಕಾರಣ ಕೆ.ಜೆ. ಜಾರ್ಜ್‌ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.ಪ್ರಕರಣವನ್ನು ರಾಜ್ಯ ಸರ್ಕಾರವು ಸಿಐಡಿಗೂ ವಹಿಸಿತ್ತು. ಸಿಐಡಿ ತಂಡವು ಜಾರ್ಜ್‌ ವಿರುದ್ಧದ ಆರೋಪಕ್ಕೆ ‘ಕ್ಲೀನ್‌ ಚಿಟ್‌’ ನೀಡಿ ನ್ಯಾಯಾಲಯಕ್ಕೆ 800 ಪುಟಗಳ ವರದಿ ಸಲ್ಲಿಸಿತ್ತು. ಬಳಿಕ 2017ರ ಅಕ್ಟೋಬರ್‌ನಲ್ಲಿ ಸುಪ್ರೀಂ ಕೋರ್ಟ್‌ ಈ ಪ್ರಕರಣವನ್ನು ಸಿಬಿಐಗೆ ವಹಿಸಿತ್ತು. ಈ ಪ್ರಕರಣದಲ್ಲಿ ಸಿಬಿಐ ಬಿ ರಿಪೋರ್ಟ್​ ಸಲ್ಲಿಸಿತ್ತು.
Published by: Sushma Chakre
First published: August 28, 2020, 12:52 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading