ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಉಚಿತ ಬಸ್ ಪ್ರಯಾಣಕ್ಕೆ ಅವಕಾಶ

ವಿದ್ಯಾರ್ಥಿಗಳ ಅನುಕೂಲದ ದೃಷ್ಟಿಯಿಂದ ಈ ಆದೇಶ ಹೊರಡಿಸಲಾಗಿದೆ. ಈ ಉಚಿತ ಪ್ರಯಾಣ ಬಿಎಂಟಿಸಿಯ ಸಾಮಾನ್ಯ ಸೇವೆ ಸಾರಿಗೆ ಬಸ್​ಗಳಲ್ಲಿ ಮಾತ್ರ ಅವಕಾಶ ನೀಡಲಾಗಿದೆ ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸಿ. ಶಿಖಾ ಆದೇಶ ಹೊರಡಿಸಿದ್ದಾರೆ.

news18-kannada
Updated:June 5, 2020, 8:33 AM IST
ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಉಚಿತ ಬಸ್ ಪ್ರಯಾಣಕ್ಕೆ ಅವಕಾಶ
ಸಾಂದರ್ಭಿಕ ಚಿತ್ರ
  • Share this:
ಬೆಂಗಳೂರು: ಎಸ್​ಎಸ್​ಎಲ್​ಸಿ ಮತ್ತು ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಗುಡ್ ನ್ಯೂಸ್ ನೀಡಿದ್ದು, ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಸ್​ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿದೆ.

ಮನೆಯಿಂದ ಪರೀಕ್ಷಾ ಕೇಂದ್ರಗಳಿಗೆ ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಬಾಕಿ ಉಳಿದಿದ್ದ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ಜೂ.18ರಂದು ಹಾಗೂ ಜೂನ್ 25 ರಿಂದ ಜುಲೈ 4 ರವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಯಲಿದೆ.  ವಿದ್ಯಾರ್ಥಿಗಳು ತಮ್ಮ ನಿವಾಸದಿಂದ ಪರೀಕ್ಷಾ ಕೇಂದ್ರದವರೆಗೆ ಹಾಗೂ ಪರೀಕ್ಷಾ ಕೇಂದ್ರದಿಂದ ತಮ್ಮ ಮನೆಯವರಿಗೂ ಬಿಎಂಟಿಸಿ ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಬಿಎಂಟಿಸಿ ಸುತ್ತೋಲೆ ಹೊರಡಿಸಿದೆ.

ಪರೀಕ್ಷೆಯ ದಿನ ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರ ಅಥವಾ ವಿದ್ಯಾರ್ಥಿ ಸ್ಮಾರ್ಟ್ ಕಾರ್ಡ್ ಪಾಸ್ ತೋರಿಸಿ ಪ್ರಯಾಣ ಮಾಡಬಹುದು. ವಿದ್ಯಾರ್ಥಿಗಳ ಅನುಕೂಲದ ದೃಷ್ಟಿಯಿಂದ ಈ ಆದೇಶ ಹೊರಡಿಸಲಾಗಿದೆ. ಈ ಉಚಿತ ಪ್ರಯಾಣ ಬಿಎಂಟಿಸಿಯ ಸಾಮಾನ್ಯ ಸೇವೆ ಸಾರಿಗೆ ಬಸ್​ಗಳಲ್ಲಿ ಮಾತ್ರ ಅವಕಾಶ ನೀಡಲಾಗಿದೆ ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಸಿ. ಶಿಖಾ ಆದೇಶ ಹೊರಡಿಸಿದ್ದಾರೆ.

ಇದನ್ನು ಓದಿ; ನಿವೃತ್ತಿಗೆ ಆರು ತಿಂಗಳು ಬಾಕಿ, ಆದರೂ, ಈ ನರ್ಸ್ ಕೊರೋನಾ ವಾರಿಯರ್

 
First published: June 5, 2020, 8:33 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading