ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿ​​ಗಳಲ್ಲಿ ಕಸ ವಿಲೇವಾರಿಗೆ ಸ್ವಚ್ಛ ಸಂಕೀರ್ಣ ಘಟಕ ಸ್ಥಾಪನೆ : ಸಚಿವ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ ಜಿಲ್ಲೆಯ 271 ಗ್ರಾಮ ಪಂಚಾಯತ್​ಗಳ ಪೈಕಿ 201 ಗ್ರಾಮ ಪಂಚಾಯತ್​​ಗಳಲ್ಲಿ ಸ್ವಚ್ಛ ಸಂಕೀರ್ಣ ಘಟಕ ಸ್ಥಾಪನೆಗೆ ಈಗಾಗಲೇ ಜಮೀನು ಗುರುತಿಸಲಾಗಿದೆ. ಕೆಲವು ಕಡೆಗಳಲ್ಲಿ ನಿರ್ಮಾಣ ಕಾಮಗಾರಿ ಆರಂಭವಾಗಿದೆ

news18-kannada
Updated:October 2, 2020, 8:16 PM IST
ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿ​​ಗಳಲ್ಲಿ ಕಸ ವಿಲೇವಾರಿಗೆ ಸ್ವಚ್ಛ ಸಂಕೀರ್ಣ ಘಟಕ ಸ್ಥಾಪನೆ : ಸಚಿವ ಕೆ.ಎಸ್.ಈಶ್ವರಪ್ಪ
ಸ್ವಚ್ಛ ಸಂಕೀರ್ಣ ಘಟಕ
  • Share this:
ಶಿವಮೊಗ್ಗ (ಅಕ್ಟೋಬರ್​. 02) : ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿ ಮಾಡಲು ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್​ಗಳಲ್ಲಿ ಸ್ವಚ್ಛ ಸಂಕೀರ್ಣ ಘಟಕಗಳನ್ನು ಸ್ಥಾಪನೆ ಮಾಡಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​​ ಇಲಾಖೆ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದರು. ಶಿವಮೊಗ್ಗ ಜಿಲ್ಲೆಯ 271 ಗ್ರಾಮ ಪಂಚಾಯತ್​ಗಳ ಪೈಕಿ 201 ಗ್ರಾಮ ಪಂಚಾಯತ್​​ಗಳಲ್ಲಿ ಸ್ವಚ್ಛ ಸಂಕೀರ್ಣ ಘಟಕ ಸ್ಥಾಪನೆಗೆ ಈಗಾಗಲೇ ಜಮೀನು ಗುರುತಿಸಲಾಗಿದೆ. ಕೆಲವು ಕಡೆಗಳಲ್ಲಿ ನಿರ್ಮಾಣ ಕಾಮಗಾರಿ ಆರಂಭವಾಗಿದೆ. ಶಿವಮೊಗ್ಗ ತಾಲೂಕಿನ ಹೊಳಲೂರು ಗ್ರಾಮ ಪಂಚಾಯತ್​ನಲ್ಲಿ ಸ್ವಚ್ಚ ಸಂಕೀರ್ಣ ಘಟಕವನ್ನು ಇಂದು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಉದ್ಘಾಟಿಸಿದರು. ಪ್ರತಿ ಗ್ರಾಮ ಪಂಚಾಯತ್​ಗೆ ತಲಾ 20 ಲಕ್ಷ ರೂಪಾಯಿ ಅನುದಾನವನ್ನು ಬಿಡುಗಡೆ ಮಾಡಲಾಗುತ್ತಿದೆ. ತ್ಯಾಜ್ಯ ವಿಲೇವಾರಿ ಮಾತ್ರವಲ್ಲದೆ ಪ್ಲಾಸ್ಟಿಕ್​ನಂತಹ ತ್ಯಾಜ್ಯಗಳನ್ನು ಮರು ಬಳಕೆ ಮಾಡುವ ವಿಧಾನಗಳನ್ನು ಸಹ ಇಲ್ಲಿ ಅಳವಡಿಸಲು ಪ್ರೋತ್ಸಾಹಿಸಲಾಗುವುದು ಎಂದು ಸಚಿವರು ತಿಳಿಸಿದರು.

ಇನ್ನು ಉದ್ಯೋಗ ಖಾತ್ರಿ ಯೋಜನೆ ಜಾರಿಯಲ್ಲಿ ಕರ್ನಾಟಕ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ. ಜಿಲ್ಲೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಲಕ್ಷಾಂತರ ಮಂದಿಗೆ ಉದ್ಯೋಗ ಕಲ್ಪಿಸಲಾಗಿದೆ. ಇದೀಗ ಪ್ರತಿ ಮನೆಯ ಬಚ್ಚಲು ನೀರಿನ ಸಮರ್ಪಕ ವಿಲೇವಾರಿಗೆ ಬಚ್ಚಲು ಗುಂಡಿ ನಿರ್ಮಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಪ್ರತಿ ಗ್ರಾಮ ಪಂಚಾಯತ್​ಗಳಲ್ಲಿ ವೈಜ್ಞಾನಿಕವಾದ ಕಸ ವಿಲೇವಾರಿಯಿಂದಾಗಿ ಪರಿಸರವನ್ನು ಸ್ವಚ್ಛವಾಗಿಡಲು ಸಾಧ್ಯವಾಗಲಿದೆ ಮಾತ್ರವಲ್ಲ, ಸ್ಥಳೀಯವಾಗಿ ಗ್ರಾಮ ಪಂಚಾಯತ್​ಗಳಿಗೆ ಆದಾಯ ಸಂಗ್ರಹಿಸಲು ಸಹ ಅವಕಾಶವಾಗಲಿದೆ ಎಂದರು.

ಸ್ವಚ್ಚ ಸಂಕೀರ್ಣ ಘಟಕವನ್ನು ಉದ್ಘಾಟಿಸಿದ ಸಚಿವ ಕೆ ಎಸ್ ಈಶ್ವರಪ್ಪ


ಅತಿ ಹೆಚ್ಚು ಬಚ್ಚಲು ಗುಂಡಿಗಳನ್ನು ನಿರ್ಮಿಸಿದ ಸೊರಬ ತಾಲೂಕು ಪಂಚಾಯತ್ ಹಾಗೂ ಶಿಕಾರಿಪುರ ತಾಲೂಕಿನ ಮುಡುಬ ಸಿದ್ದಾಪುರ ಗ್ರಾಮ ಪಂಚಾಯತ್ ಆಡಳಿತವನ್ನು ಸಚಿವರು ಈ ಸಂದರ್ಭದಲ್ಲಿ ಪ್ರಶಂಸಿದರು.

ಇದನ್ನೂ ಓದಿ : ಗಾಂಧಿ ಕೊಂದ ಗೋಡ್ಸೆ ಬಿಜೆಪಿ, ಆರ್​ಎಸ್​​ಎಸ್​​​ನ ಆರಾಧ್ಯ ದೈವ : ಸಿದ್ದರಾಮಯ್ಯ ವಾಗ್ದಾಳಿ

ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಮಾತನಾಡಿ, ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಹ ಘನತ್ಯಾಜ್ಯ ವಿಲೇವಾರಿ ಘಟಕಗಳ ಸಮರ್ಪಕವಾದ ಅನುಷ್ಠಾನದಿಂದ ನಮ್ಮ ಗ್ರಾಮೀಣಾ ಪ್ರದೇಶಗಳು ಸ್ವಚ್ಛ ಸುಂದರ ಆರೋಗ್ಯ ಪೂರ್ಣವಾಗಲು ಸಾಧ್ಯವಾಗಲಿದೆ. ಕಸ ವಿಲೇವಾರಿ ಬಗ್ಗೆ ಪ್ರತಿಯೊಬ್ಬರಲ್ಲೂ ಅರಿವು ಮೂಡಿಸುವ ಅಗತ್ಯವಿದೆ ಎಂದು ಹೇಳಿದರು.
ಕಸ ವಿಲೇವಾರಿ ಹಾಗೂ ತ್ಯಾಜ್ಯಗಳ ಸಮರ್ಪಕ ಬಳಕೆ ಕುರಿತು ವಿವಿಧ ಗ್ರಾಮ ಪಂಚಾಯತ್​ಗಳು ಸಜ್ಜುಗೊಳಿಸಿದ್ದ ವಸ್ತು ಪ್ರದರ್ಶನ ಮಳಿಗೆಗಳು ಆಕರ್ಷಕವಾಗಿದ್ದವು. ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ , ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ ಉಪಸ್ಥಿತರಿದ್ದರು.
Published by: G Hareeshkumar
First published: October 2, 2020, 7:52 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading