ಶಿವಮೊಗ್ಗದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಪೂರಕ ವಾತಾವರಣ; ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಶಿವಮೊಗ್ಗ ನಗರದಲ್ಲಿ ಹೊಸ ವಿಮಾನ ನಿಲ್ದಾಣ ಪ್ರಾರಂಭವಾಗಲಿದ್ದು, ಕೈಗಾರಿಕಾ ಜಿಲ್ಲೆಯಾಗಿ ಬೆಳೆಯುವ ಎಲ್ಲಾ ಅವಕಾಶಗಳಿವೆ ಎಂದು ಹೇಳಿದರು.

news18-kannada
Updated:September 20, 2020, 3:21 PM IST
ಶಿವಮೊಗ್ಗದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಪೂರಕ ವಾತಾವರಣ; ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್
ಶಿವಮೊಗ್ಗ ಜಿಲ್ಲಾಧಿಕಾರಿ
  • Share this:
ಶಿವಮೊಗ್ಗ(ಸೆ.20): ಶಿವಮೊಗ್ಗ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ, ಹೊಸ ರೈಲು ಸಂಪರ್ಕ ಮತ್ತು ಚತುಷ್ಪಥ ಹೆದ್ದಾರಿ ನಿರ್ಮಾಣ ಕಾಮಗಾರಿಗಳು ಅನುಷ್ಟಾನಗೊಳ್ಳುತ್ತಿವೆ.  ಹೊಸದಾಗಿ ಕೈಗಾರಿಕೆಗಳನ್ನು ಪ್ರಾರಂಭಿಸಲು ಪೂರಕವಾದ ವಾತಾವರಣವಿದೆ. ಜಿಲ್ಲೆಯಲ್ಲಿ ಉದ್ದಿಮೆಗಳನ್ನು ಆರಂಭಿಸಲು ರಸ್ತೆ ಸಂಪರ್ಕ, ವಿದ್ಯುತ್, ನೀರು ಪೂರೈಕೆಯಂತಹ ಅಗತ್ಯ ಮೂಲಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ. ಶಿವಮೊಗ್ಗದ  ಮಾಚೇನಹಳ್ಳಿಯಲ್ಲಿ ನೂತನ ಕೈಗಾರಿಕಾ ನೀತಿ 2020-25 ಮತ್ತು ಹೂಡಿಕೆ ಅವಕಾಶಗಳ ಕುರಿತು ಅರಿವು ಕಾರ್ಯಕ್ರಮ ಹಾಗೂ ಇತ್ತೀಚಿನ ಕಾರ್ಮಿಕ ಕಾನೂನು ತಿದ್ದುಪಡಿಗಳ ಕುರಿತು ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು  ಶಿವಮೊಗ್ಗ ಜಿಲ್ಲೆಯಲ್ಲಿರುವ ಕೈಗಾರಿಕಾ ಪ್ರದೇಶದಲ್ಲಿ ಒಳಚರಂಡಿ ವ್ಯವಸ್ಥೆ, ಪ್ರತ್ಯೇಕ ವಿದ್ಯುತ್ ಸಬ್‍ಸ್ಟೇಷನ್ ನಿರ್ಮಾಣ ಇತ್ಯಾದಿ ಬೇಡಿಕೆಗಳನ್ನು ಮುಂದಿನ ದಿನಗಳಲ್ಲಿ ಪರಿಹರಿಸಲಾಗುವುದು. ಕೃಷಿ ಆಧಾರಿತ ಕೈಗಾರಿಕೆಗಳು ಸೇರಿದಂತೆ ಹಲವು ಸಣ್ಣ ಕೈಗಾರಿಕೆಗಳನ್ನು ಆರಂಭಿಸಲು ಜಿಲ್ಲೆಯಲ್ಲಿ ಉತ್ತಮ ಅವಕಾಶಗಳಿವೆ ಎಂದರು.

ಮಹಾರಾಷ್ಟ್ರದಲ್ಲಿ ಭಾರೀ ಮಳೆ ಹಿನ್ನೆಲೆ ವಿಜಯಪುರದಲ್ಲಿ ಪ್ರವಾಹ ಭೀತಿ

ಕೋವಿಡ್ ಸಂದರ್ಭದಲ್ಲಿ ಬೇರೆ ನಗರಗಳಿಂದ ಜಿಲ್ಲೆಗೆ ವಾಪಾಸು ಬಂದಿರುವ ಪ್ರತಿಭಾವಂತರು ಕೈಗಾರಿಕೆ ಆರಂಭಿಸುವ ಹೊಸ ಸಾಧ್ಯತೆಗಳನ್ನು ಕಂಡುಕೊಳ್ಳುವ ಅಗತ್ಯವಿದೆ. ಅಂತಹವರಿಗೆ ಸರ್ಕಾರದ ವತಿಯಿಂದ ಎಲ್ಲಾ ರೀತಿಯ ನೆರವನ್ನು ಒದಗಿಸಲಾಗುವುದು ಎಂದು ಬರವಸೆ ನೀಡಿದರು. ಕಾಸಿಯಾ ಅಧ್ಯಕ್ಷ ಕೆ.ಬಿ.ಅರಸಪ್ಪ ಮಾತನಾಡಿ, ಶಿವಮೊಗ್ಗದಲ್ಲಿ ಬಂಡವಾಳ ಹೂಡಿಕೆ ಮಾಡಲು ಉತ್ತಮ ಅವಕಾಶಗಳಿವೆ ಎಂದರು.

ಉತ್ತಮ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿದರೆ ಹೂಡಿಕೆದಾರರು ಧೈರ್ಯದಿಂದ ಬಂಡವಾಳ ತೊಡಗಿಸಲು ಮುಂದೆ ಬರುತ್ತಾರೆ. ಅಂತಹ ಹೊಸ ಹೂಡಿಕೆದಾರರನ್ನು ಪ್ರೋತ್ಸಾಹಿಸುವ ಕಾರ್ಯ ನಡೆಯಬೇಕಿದೆ. ತೀರ್ಥಹಳ್ಳಿ ಭಾಗದಲ್ಲಿ ಹೊಸದಾಗಿ ಕೈಗಾರಿಕಾ ವಸಾಹತು ಆರಂಭಿಸಿದರೆ ಆ ಭಾಗದಲ್ಲಿ ಕೈಗಾರಿಕೆಗಳನ್ನು ಆರಂಭಿಸಲು ಉತ್ತೇಜನ ನೀಡಬಹುದಾಗಿದೆ. ಶಿವಮೊಗ್ಗ ನಗರದಲ್ಲಿ ಹೊಸ ವಿಮಾನ ನಿಲ್ದಾಣ ಪ್ರಾರಂಭವಾಗಲಿದ್ದು, ಕೈಗಾರಿಕಾ ಜಿಲ್ಲೆಯಾಗಿ ಬೆಳೆಯುವ ಎಲ್ಲಾ ಅವಕಾಶಗಳಿವೆ ಎಂದು ಹೇಳಿದರು.

ಕರ್ನಾಟಕ ಆರ್ಯವೈಶ್ಯ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್ ಮಾತನಾಡಿ, ಸರ್ಕಾರ ಹೊಸದಾಗಿ ಘೋಷಿಸಿರುವ ಕೈಗಾರಿಕಾ ನೀತಿ ಕೈಗಾರಿಕೆಗಳಿಗೆ ಪೂರಕವಾಗಿದೆ. ಜಿಲ್ಲೆಯಲ್ಲಿ ಕೈಗಾರಿಕೆಗಳಿಗೆ ಪೂರಕವಾದ ವಾತಾವರಣವಿದ್ದು, ಇದರ ಗರಿಷ್ಟ ಪ್ರಯೋಜನವನ್ನು ಪಡೆದುಕೊಳ್ಳಬೇಕಾಗಿದೆ ಎಂದರು.

ಮಾಚೇನಹಳ್ಳಿ ಕೈಗಾರಿಕೆಗಳ ಸಂಘದ ಅಧ್ಯಕ್ಷ ಎಂ.ಎ.ರಮೇಶ ಹೆಗ್ಗಡೆ, ಶಿವಮೊಗ್ಗ ವಾಣಿಜ್ಯ ಮತ್ತು ಕೈಗಾರಿಕೆಗಳ ಮಹಾಮಂಡಳದ ಅಧ್ಯಕ್ಷ ಜೆ.ಆರ್.ವಾಸುದೇವ್. ಉಪಸ್ಥಿತರಿದ್ದರು.
Published by: Latha CG
First published: September 20, 2020, 3:21 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading