ಶಿವಮೊಗ್ಗದಲ್ಲಿ ಧಾರಾಕಾರ ಮಳೆ - ಮೈದುಂಬಿ ಹರಿಯುತ್ತಿರುವ ಜೋಗ್ ಜಲಪಾತ

ಮಲೆನಾಡಿನಲ್ಲಿ ಗುಡ್ಡ ,ಬೆಟ್ಟ, ಹಸಿರು ಕಾನನದ ನಡುವೆ ಬಳುಕುತ್ತಾ ಹರಿಯುವ ಶರಾವತಿ ನದಿ ಜೋಗದಲ್ಲಿ ಸುಮಾರು 950 ಅಡಿಗಳಿಂದ ಭೋರ್ಗರೆಯುತ್ತಾ ಧುಮುಕುವ ದೃಶ್ಯ ರುದ್ರ ರಮಣೀಯ.

news18-kannada
Updated:August 5, 2020, 8:49 PM IST
ಶಿವಮೊಗ್ಗದಲ್ಲಿ ಧಾರಾಕಾರ ಮಳೆ - ಮೈದುಂಬಿ ಹರಿಯುತ್ತಿರುವ ಜೋಗ್ ಜಲಪಾತ
ಜೋಗ್​ ಜಲಪಾತ
  • Share this:
ಶಿವಮೊಗ್ಗ(ಆ.05): ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಇಲ್ಲಿನ ಕಾರ್ಗಲ್, ಜೋಗ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗುತ್ತಿದೆ. ಇದರಿಂದಾಗಿ ವಿಶ್ವ ವಿಖ್ಯಾತ ಜೋಗ ಜಲಪಾತ ಮೈದುಂಬಿ ಹರಿಯುತ್ತಿದೆ. ಜೋಗ ಜಲಪಾತಕ್ಕೆ ಸಾಕಷ್ಟು ಪ್ರಮಾಣದಲ್ಲಿ ಮಳೆ ನೀರು ಹರಿದು ಬರುತ್ತಿದೆ. ಪ್ರಕೃತಿಯ ಸುಂದರ ಮಡಿಲಲ್ಲಿ ಜೋಗ ಜಲಪಾತ ದುಮ್ಮಿಕ್ಕಿ ಹರಿಯುತ್ತಿದ್ದಾಳೆ. ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದ್ದಾಳೆ.

ಮಲೆನಾಡಿನಲ್ಲಿ ಗುಡ್ಡ ,ಬೆಟ್ಟ, ಹಸಿರು ಕಾನನದ ನಡುವೆ ಬಳುಕುತ್ತಾ ಹರಿಯುವ ಶರಾವತಿ ನದಿ ಜೋಗದಲ್ಲಿ ಸುಮಾರು 950 ಅಡಿಗಳಿಂದ ಭೋರ್ಗರೆಯುತ್ತಾ ಧುಮುಕುವ ದೃಶ್ಯ ರುದ್ರ ರಮಣೀಯ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಅಂಬುತೀರ್ಥದಲ್ಲಿ  ಜನಿಸುವ ಶವಾವತಿ ನದಿ, ನಂತರ ಹೊಸನಗರ ತಾಲೂಕಿನ ಮೂಲಕ ಹರಿದು ಸಾಗರದ ತಾಲೂಕಿನ ಜೋಗದಲ್ಲಿ ದುಮ್ಮಿಕುವ ಮೂಲಕ ಜಲಪಾತ ಸೃಷಿಯಾಗಿದೆ.

ಮಳೆಗಾಲದಲ್ಲಿ ಜೋಗ ಜಲಪಾತ ತನ್ನ ನಿಜ ಸೌಂದರ್ಯವನ್ನು ಜಗತ್ತಿಗೆ ಉಣ ಬಡಿಸುತ್ತಾಳೆ. ಸಾಗರ ತಾಲೂಕಿನಲ್ಲಿ ಮಳೆ ಜೋರಾದರೆ ಸಾಕು ಜೋಗ ಜಲಪಾತ ಕಳೆ ಕಟ್ಟುತ್ತದೆ. ಶರಾವತಿ ನದಿಗೆ ಲಿಂಗನಮಕ್ಕಿ ಅಣೆಕಟ್ಟು ಕಟ್ಟಲಾಗಿದೆ. ಅಣೆಕಟ್ಟು ಭರ್ತಿಯಾಗುವವರೆಗೂ ಜೋಗ ಜಲಪಾತಕ್ಕೆ ಹೆಚ್ಚಿನ ನೀರು ಹರಿದು ಬರುವುದಿಲ್ಲ. ಆದರೆ ತಾಲೂಕಿನಲ್ಲಿ ಹೆಚ್ಚು ಮಳೆಯಾದ ಸಮಯದಲ್ಲಿ ಸುತ್ತಮುತ್ತಲ ನೀರು ಹರಿದು ಶರಾವತಿ ನದಿ ಸೇರುವುದರಿಂದ ಜೋಗ ಜಲಪಾತ ದುಮ್ಮಿಕ್ಕುತ್ತದೆ.

ಈಗ ಜೋಗ ಜಲಪಾತ ಮಂಜಿನೊಂದಿಗೆ ಕಣ್ಣ ಮೂಚ್ಚಾಲೆ ಆಡುತ್ತಿದ್ದಾಳೆ. ಮಂಜಿನೊಂದಿಗೆ ಕೆಲ ಕಾಲ ಮರೆಯಾಗುವ ಜಲಪಾತ, ಮಂಜು ಮರೆಯಾದ ತಕ್ಷಣ ಮತ್ತೇ ಗೋಚರಿಸುವ ಜಲಪಾತದ ಕಣ್ಣಮುಚ್ಚಾಲೆ ಆಟ ಪ್ರವಾಸಿಗರನ್ನು ಮುಂತ್ರ ಮುಗ್ದರನ್ನಾಗಿಸುತ್ತದೆ. ರಾಜ, ರಾಣಿ, ರೋರರ್ ರಾಕೇಟ್ ಕವಲುಗಳಾಗಿ ಧುಮ್ಮಿಕ್ಕುವ ವೈಭವ ಮನ ಮೋಹಕವಾಗಿದೆ.

ಇದನ್ನೂ ಓದಿ: Coronavirus Updates: ಕರ್ನಾಟಕದಲ್ಲಿ ಕೋವಿಡ್​​-19: ಒಂದೇ ದಿನ 5619 ಕೇಸ್​, 1.51 ಲಕ್ಷ ದಾಟಿದ ಸೋಂಕಿತರ ಸಂಖ್ಯೆ

ಸುರಿಯುವತ್ತಿರುವ ಮಳೆ ಜಲಪಾತವನ್ನು ಆವರಿಸಿದ ಮಂಜು, ಆಗಾಗೆ ತೆರೆ ಸರಿಸಿ ಮಂಜು ಮರೆಯಾಗುವ ದೃಶ್ಯ ಪ್ರವಾಸಿಗರನ್ನು ಆಕರ್ಷಿಸುತ್ತದೆ. ಮುಂಗಾರು ಮಳೆಯ ನಡುವೆ ಜಲಪಾತವನ್ನು ನೋಡುವುದೇ ಒಂದು ವೈಭವ. ಹಾಲಿನ ನೊರೆಯಂತೆ ಜೋಗ ಜಲಪಾತ ಕಣ್ಮನ ಸೆಳೆಯುತ್ತಿದೆ. ಸಾಯೋದ್ರೋಳಗೆ ಒಮ್ಮೆ ನೋಡು ಜೋಗಾದ್ ಗುಂಡಿ ಎಂಬ ಕವಿವಾಣಿಯಂತೆ ಜೀವನದಲ್ಲಿ ಒಮ್ಮೆಯಾದರೂ ಜೋಗ ಜಲಪಾತದ ಮೆರುಗನ್ನು ಮಳೆಯಾಗದಲ್ಲಿ ನೋಡಲೇ ಬೇಕು.   ಶರಾವತಿ ನದಿ ಸುಂದರವಾದ ಒಂದು ದೃಶ್ಯ ಕಾವ್ಯ. ಮಲೆನಾಡಿನ ಸುಂದರ ಸೊಬಗಿನಲ್ಲಿ ಬಳಕುತ್ತಾ ಹರಿದು, ಜೋಗದಲ್ಲಿ ತನ್ನ ವೈಭವವನ್ನು ಮೆರೆದಿದ್ದಾಳೆ.
Published by: Ganesh Nachikethu
First published: August 5, 2020, 8:45 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading