ಕಲಬುರ್ಗಿ ಜಿಲ್ಲೆಯಲ್ಲಿ ಮಳೆಯ ಅಬ್ಬರ; ಹಲವು ಗ್ರಾಮಗಳು ಜಲಾವೃತ, ಮಳಖೇಡ ಸೇತುವೆ ಬಂದ್

ಕಲಬುರ್ಗಿ ನಗರದಲ್ಲಿಯೂ ಹಲವು ಬಡಾವಣೆಗಳಲ್ಲಿ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿವೆ. ನಿನ್ನೆಯೂ ಹತ್ತಾರು ಮನೆಗಳಿಗೆ ನೀರು ನುಗ್ಗಿ, ಜನ ಕಂಗಾಲಾಗುವಂತೆ ಮಾಡಿತ್ತು. ರಾತ್ರಿಯೂ ನಗರದಲ್ಲಿ ಭಾರಿ ಮಳೆ ಸುರಿದಿದ್ದರಿಂದ ಜನ ಸಂಕಷ್ಟಕ್ಕೆ ಗುರಿಯಾಗುವಂತಾಗಿದೆ.

news18-kannada
Updated:September 16, 2020, 12:43 PM IST
ಕಲಬುರ್ಗಿ ಜಿಲ್ಲೆಯಲ್ಲಿ ಮಳೆಯ ಅಬ್ಬರ; ಹಲವು ಗ್ರಾಮಗಳು ಜಲಾವೃತ, ಮಳಖೇಡ ಸೇತುವೆ ಬಂದ್
ಕಲಬುರ್ಗಿಯಲ್ಲಿ ಮಳೆ
  • Share this:
ಕಲಬುರ್ಗಿ(ಸೆ.16):  ಕಲಬುರ್ಗಿ ಜಿಲ್ಲೆಯಲ್ಲಿ ವರುಣನ ಪ್ರತಾಪ ಮುಂದುವರಿದಿದೆ. ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಜನಜೀವನ ತತ್ತರಗೊಳ್ಳುವಂತೆ ಮಾಡಿದೆ. ಭಾರಿ ಮಳೆಗೆ ನದಿ, ಹಳ್ಳ-ಕೊಳ್ಳ ತುಂಬಿ ಹರಿಯುತ್ತಿವೆ. ಕಾಗಿಣಾ ನದಿ ಉಕ್ಕ ಹರಿಯುತ್ತಿದ್ದು, ಮಳಖೇಡ ಸೇತುವೆ ಮೇಲೆ ನೀರು ಹರಿಯಲಾರಂಭಿಸಿವೆ. ಮತ್ತೊಂದೆಡೆ ಚಿತ್ತಾಪುರ ತಾಲೂಕಿನ ಹಲವು ಗ್ರಾಮಗಳು ಜಲಾವೃತಗೊಂಡಿವೆ. ಕಲಬುರ್ಗಿ ಜಿಲ್ಲೆಯಾದ್ಯಂತ ವರುಣನ ಅಬ್ಬರ ಮುಂದುವರೆದಿದೆ. ಭಾರಿ ಮಳೆಗೆ ಹಳ್ಳ, ಕೊಳ್ಳ, ನದಿಗಳು ತುಂಬಿ ಹರಿಯುತ್ತಿವೆ. ಜಿಲ್ಲೆಯ ಕಾಗಿಣಾ ನದಿಯೂ ತುಂಬಿ ಹರಿಯುತ್ತಿದೆ. ಪರಿಣಾಮ ಮಳಖೇಡ ಸೇತುವೆ ಸಂಪೂರ್ಣ ಜಲಾವೃತಗೊಂಡಿದ್ದು, ಕಲಬುರ್ಗಿ- ಸೇಡಂ ರಸ್ತೆ ಸಂಚಾರ ಸ್ಥಗಿತಗೊಂಡಿದೆ. ಕಳೆದ ರಾತ್ರಿ ಮಳಖೇಡ ಸೇತುವೆ ಮುಳುಗಡೆಯಾಗಿದೆ. ಕಲಬುರ್ಗಿ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಗ್ರಾಮದ ಬಳಿಯಿರೋ ಸೇತುವೆ ಮೇಲೆ ನೀರು ನುಗ್ಗುತ್ತಿವೆ. ನೀರಿನ ಪ್ರಮಾಣ ಹೆಚ್ಚಿರುವ ಹಿನ್ನೆಲೆಯಲ್ಲಿ ಪೊಲೀಸರು ವಾಹನ ಸಂಚಾರಕ್ಕೆ ನಿರ್ಬಂಧ ಹಾಕಿದ್ದಾರೆ. ಹೀಗಾಗಿ ಕಲಬುರ್ಗಿ - ಸೇಡಂ ನಡುವೆ ಸಂಚಾರ ಅಸ್ತವ್ಯಸ್ತಗೊಂಡಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ವರುಣನ ಅಬ್ಬರಕ್ಕೆ ಕಲಬುರ್ಗಿ ಜನತೆ ತತ್ತರಿಸಿದೆ.

Ramesh Jarakiholi: ಮತ್ತೆ ಡಿಸಿಎಂ ಸ್ಥಾನ ಪಡೆಯುವ ಕಸರತ್ತು ಆರಂಭಿಸಿದ ರಮೇಶ್ ಜಾರಕಿಹೊಳಿ

ಭಾರಿ ಮಳೆಯಿಂದ ನದಿ ತೀರದ ಹತ್ತಾರು ಗ್ರಾಮಗಳಿಗೆ ನೀರು ನುಗ್ಗಿದೆ. ಚಿತ್ತಾಪುರ ತಾಲೂಕಿನ ಹಲವು ಗ್ರಾಮಗಳಿಗೆ ನುಗ್ಗಿದ ನೀರು. ಬಲವಾಡಗಿ, ಕಡಬೂರ, ಚಾಮನೂರು ಗ್ರಾಮ ಜಲಾವೃವೃತಗೊಂಡಿವೆ. ಕಾಗಿಣಾ ನದಿ ಉಕ್ಕಿ ಹರಿಯುತ್ತಿರುವುದರಿಂದ ಅಕ್ಕ-ಪಕ್ಕದ ಗ್ರಾಮಗಳಿಗೆ ನೀರು ನುಗ್ಗುವಂತಾಗಿದೆ. ಹತ್ತಾರು ಮನೆಗಳಿಗೆ ನೀರು ನುಗ್ಗಿದ್ದು, ಮನೆಯಲ್ಲಿದ್ದ ದವಸ-ಧಾನ್ಯ ನೀರಿಗೆ ಆಹುತಿಯಾಗಿವೆ.

ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಕಲಬುರ್ಗಿ ನಗರದಲ್ಲಿಯೂ ಹಲವು ಬಡಾವಣೆಗಳಲ್ಲಿ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿವೆ. ನಿನ್ನೆಯೂ ಹತ್ತಾರು ಮನೆಗಳಿಗೆ ನೀರು ನುಗ್ಗಿ, ಜನ ಕಂಗಾಲಾಗುವಂತೆ ಮಾಡಿತ್ತು. ರಾತ್ರಿಯೂ ನಗರದಲ್ಲಿ ಭಾರಿ ಮಳೆ ಸುರಿದಿದ್ದರಿಂದ ಜನ ಸಂಕಷ್ಟಕ್ಕೆ ಗುರಿಯಾಗುವಂತಾಗಿದೆ.

ಇದೇ ವೇಳೆ ನದಿ, ಹಳ್ಳ-ಕೊಳ್ಳಗಳು ಉಕ್ಕಿ ಹರಿಯುತ್ತಿರುವ ಪರಿಣಾಮ ಸಾವಿರಾರು ಎಕರೆ ಪ್ರದೇಶಕ್ಕೆ ನೀರು ನುಗ್ಗಿದೆ. ಕೋಟ್ಯಾಂತರ ರೂಪಾಯಿ ಮೌಲ್ಯದ ಬೆಳೆ ಹಾನಿಯಾಗೋ ಭೀತಿ ಎದುರಾಗಿದೆ. ರೈತ ಸಮುದಾಯ ತೀವ್ರ ಸಂಕಷ್ಟಕ್ಕೆ ಗುರಿಯಾಗುವಂತಾಗಿದೆ. ಇನ್ನೂ ಜಿಲ್ಲೆಯಲ್ಲಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ಜನ ಮತ್ತಷ್ಟು ಕಂಗಾಲಾಗಿದ್ದಾರೆ.
Published by: Latha CG
First published: September 16, 2020, 12:43 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading