Karnataka Weather: ಅ. 27ರವರೆಗೆ ಕರ್ನಾಟಕದ ಹಲವೆಡೆ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಎಚ್ಚರಿಕೆ

Karnataka Rain Updates: ಅಕ್ಟೋಬರ್ 25 ಮತ್ತು 26ರಂದು ಕರ್ನಾಟಕದ ಬಹುತೇಕ ಎಲ್ಲಾ ಸ್ಥಳಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಕಡೆ ಅ. 26ರವರೆಗೆ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

news18-kannada
Updated:October 24, 2020, 3:26 PM IST
Karnataka Weather: ಅ. 27ರವರೆಗೆ ಕರ್ನಾಟಕದ ಹಲವೆಡೆ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಎಚ್ಚರಿಕೆ
ಮಳೆ
  • Share this:
ಬೆಂಗಳೂರು (ಅ. 24): ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನಿನ್ನೆಯಿಂದ ಮಳೆಯ ಅಬ್ಬರ ಶುರುವಾಗಿದೆ. ನಾಳೆಯಿಂದ 2 ದಿನ ಮತ್ತೆ ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಕ್ಟೋಬರ್ 25ರಂದು ಬೆಂಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗದಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್. ಪಾಟೀಲ್ ಹೇಳಿದ್ದಾರೆ. ಅಕ್ಟೋಬರ್ 25 ಮತ್ತು 26ರಂದು ಬಹುತೇಕ ಎಲ್ಲಾ ಸ್ಥಳಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಕಡೆ ಅ. 26ರವರೆಗೆ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಹೀಗಾಗಿ, ಈ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನಲ್ಲಿ ಇಂದು ಮಳೆಯಾಗುವ ನಿರೀಕ್ಷೆ ಇದೆ. ಅಕ್ಟೋಬರ್ 27, 28ರಂದು ಉತ್ತರ ಒಳನಾಡಿನಲ್ಲಿ ಒಣ ಹವೆ ಇರಲಿದೆ. ಹಾವೇರಿ ಗದಗ ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್ ಕೊಡಲಾಗಿದೆ. ದಕ್ಷಿಣ ಒಳನಾಡಿನಲ್ಲಿ 25 ಮತ್ತು 26ರಂದು ಮಳೆಯಾಗುವ ನಿರೀಕ್ಷೆಯಿದೆ.

ಇದನ್ನೂ ಓದಿ: Bangalore Rain: ಬೆಂಗಳೂರಿನಲ್ಲಿ ಹಸುಗೂಸನ್ನು ಎತ್ತಿ ಹಿಡಿದು ಪ್ರವಾಹ ದಾಟಿದ ಯುವಕ; ವಿಡಿಯೋ ವೈರಲ್

ಅ. 26 ಮತ್ತು 27ರಂದು ರಾಜ್ಯದ ಬಹುತೇಕ ಎಲ್ಲ ಕಡೆ ಮಳೆಯಾಗುವ ನಿರೀಕ್ಷೆ ಇದ್ದು, ಚಿಕ್ಕಬಳ್ಳಾಪುರ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರಿನ ಕೆಲವು ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯ ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆಯಲ್ಲಿ ಅ. 27ರವರೆಗೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಸೋಮವಾರದವರೆಗೂ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ.
Published by: Sushma Chakre
First published: October 24, 2020, 3:26 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading