ಸಿದ್ದರಾಮಯ್ಯಗೆ ಧಮ್ ಇದ್ದರೆ ಚಿದಂಬರಂ ಮುಂದೆ ನಿಂತು ಮಾತಾಡಲಿ; ನಳಿನ್ ಕುಮಾರ್ ಕಟೀಲ್ ಸವಾಲು

ಕರ್ನಾಟಕದ ಜನರಿಗೆ ಕೊರೋನಾ ಲಸಿಕೆಯನ್ನು ಉಚಿತವಾಗಿ ಕೊಡಿಸುವ ಧಮ್ ನಿಮಗೆ ಇದೆಯೇ? ಎಂದು ನಿನ್ನೆ ನಳಿನ್ ಕುಮಾರ್ ಕಟೀಲ್ ಅವರಿಗೆ ಸಿದ್ದರಾಮಯ್ಯ ಪ್ರಶ್ನಿಸಿದ್ದರು. ಅದಕ್ಕೆ ಉತ್ತರಿಸಿರುವ ನಳಿನ್ ಕುಮಾರ್, ನಿಮಗೆ ಧಮ್ ಇದ್ದರೆ ಚಿದಂಬರಂ ಮುಂದೆ ನಿಂತು ಮಾತಾಡಿ ಎಂದು ಸವಾಲು ಹಾಕಿದ್ದಾರೆ.

news18-kannada
Updated:October 24, 2020, 1:13 PM IST
ಸಿದ್ದರಾಮಯ್ಯಗೆ ಧಮ್ ಇದ್ದರೆ ಚಿದಂಬರಂ ಮುಂದೆ ನಿಂತು ಮಾತಾಡಲಿ; ನಳಿನ್ ಕುಮಾರ್ ಕಟೀಲ್ ಸವಾಲು
ನಳಿನ್ ಕುಮಾರ್ ಕಟೀಲ್
  • Share this:
ಕೊಡಗು (ಅ. 24): ಬಿಹಾರದಲ್ಲಿ ಕೊರೋನಾ ಲಸಿಕೆಯನ್ನು ಉಚಿತವಾಗಿ ವಿತರಿಸುವ ವಿಷಯಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ನಡುವಿನ ಮಾತಿನ ಸಮರ ಮುಂದುವರೆದಿದೆ. ನನ್ನ ಧಮ್ ಬಗ್ಗೆ ಮಾತನಾಡುವ ಸಿದ್ದರಾಮಯ್ಯ ಅವರಿಗೆ ಧಮ್ ಇದ್ದರೆ ಚಿದಂಬರಂ ಮುಂದೆ ನಿಂತು ಮಾತನಾಡಲಿ ಎಂದು ನಳಿನ್ ಕುಮಾರ್ ಕಟೀಲು ಮಾಜಿ ಸಿಎಂ ಸಿದ್ದರಾಮಯ್ಯಗೆ ತಿರುಗೇಟು ನೀಡಿದ್ದಾರೆ. ಆ ಮೂಲಕ ಚಿದಂಬರಂ ಅವರ ಬಳಿ ಸಿದ್ದರಾಮಯ್ಯ ಅವರ ವೀಕ್​ನೆಸ್ ಏನೋ ಇದೆ ಎಂಬುದನ್ನು ನಳೀನ್ ಕುಮಾರ್ ಕಟೀಲು ಹೇಳಿದ್ದಾರೆ.

ಮಡಿಕೇರಿಯಲ್ಲಿ ನಡೆಯುತ್ತಿರುವ ಕೊಡಗು ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಭೆಗೆ ಆಗಮಿಸಿದ  ವೇಳೆ ಮಾಧ್ಯಮಗಳ ಜೊತೆಗೆ ಮಾತನಾಡಿದ ನಳಿನ್ ಕುಮಾರ್ ಕಟೀಲ್, ನನ್ನ ಧಮ್ ಬಗ್ಗೆ ಮಾತನಾಡುವ ಸಿದ್ದರಾಮಯ್ಯನವರಿಗೆ ಧಮ್ ಇದ್ದರೆ ಪಿ. ಚಿದಂಬರಂ ಅವರ ಮುಂದೆ ನಿಂತು ಮಾತನಾಡಲಿ ಎಂದಿದ್ದಾರೆ. ಬಿಹಾರದ ಚುನಾವಣೆಯಲ್ಲಿ ಗೆದ್ದರೆ ಉಚಿತವಾಗಿ ಕೊರೋನಾ ಲಸಿಕೆ ವಿತರಣೆ ಮಾಡಲಾಗುವುದು ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದರು. ಇದಕ್ಕೆ ನಿನ್ನೆ ಆಕ್ರೋಶದಿಂದ ಟ್ವೀಟ್ ಮಾಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ, ನಮ್ಮ ರಾಜ್ಯದಿಂದಲೇ ರಾಜ್ಯಸಭೆಗೆ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್ ಅವರ ಮನವೊಲಿಸಿ, ನಿಮ್ಮದೇ ಪಕ್ಷ ಅಧಿಕಾರದಲ್ಲಿರುವ ಕರ್ನಾಟಕದಲ್ಲಿ ಕೊರೋನಾದಿಂದ ಭೀತಿಗೊಳಗಾಗಿರುವ ಜನರಿಗೆ ಕೊರೋನಾ ಲಸಿಕೆಯನ್ನು ಉಚಿತವಾಗಿ ಕೊಡಿಸುವ ಧಮ್ ನಿಮಗೆ ಇದೆಯೇ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಪ್ರಶ್ನೆ ಮಾಡಿದ್ದರು.

ಇದನ್ನೂ ಓದಿ: ಕರ್ನಾಟಕಕ್ಕೂ ಉಚಿತ ಕೊರೋನಾ ಲಸಿಕೆ ಕೊಡಿಸುವ ಧಮ್ ನಿಮಗಿದೆಯೇ?; ನಳಿನ್ ಕುಮಾರ್​ಗೆ ಸಿದ್ದರಾಮಯ್ಯ ಸವಾಲು

ಕರ್ನಾಟಕದಿಂದ 25 ಸಂಸದರು ಆಯ್ಕೆಯಾಗಿದ್ದಾರೆ. ಆ ಸಂಸದರು, ಮುಖ್ಯಮಂತ್ರಿ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕರ್ನಾಟಕಕ್ಕೂ ಉಚಿತ ಕೊರೋನಾ ಲಸಿಕೆ ವಿತರಿಸಲು ಬೇಡಿಕೆ ಇಡಬೇಕು. ನಮ್ಮ ರಾಜ್ಯದ ರಾಜ್ಯಸಭಾ ಸದಸ್ಯೆ ಮತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರಾಣರಕ್ಷಕ ಕೊರೋನಾ ಲಸಿಕೆಯನ್ನು ಬಿಹಾರ ರಾಜ್ಯಕ್ಕೆ ಉಚಿತವಾಗಿ ನೀಡುವ ಭರವಸೆ ನೀಡಿದ್ದಾರೆ. ಅವರ ಈ ಔದಾರ್ಯದ ಬಗ್ಗೆ ನಿಮ್ಮ ಅಭಿಪ್ರಾಯವೇನು ನಳಿನ್ ಕುಮಾರ್ ಕಟೀಲ್ ಅವರೇ? ಎಂದು ಸಿದ್ದರಾಮಯ್ಯ ಲೇವಡಿ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಇಂದು ಪ್ರತಿಕ್ರಿಯೆ ನೀಡಿರುವ ನಳಿನ್ ಕುಮಾರ್ ಕಟೀಲ್, ಕೊರೊನಾ ಲಸಿಕೆ ಬಂದಾಗ ಆತ್ಮನಿರ್ಭರ್ ಭಾರತ್ ಯೋಜನೆ ಅಡಿಯಲ್ಲಿ ಯಾವೆಲ್ಲ ರಾಜ್ಯಗಳಿಗೆ ಹೇಗೆ ತಲುಪಿಸಬೇಕೋ ಹಾಗೆ ತಲುಪಿಸುತ್ತೇವೆ. ಅದನ್ನು ಯಾರಿಂದಲೂ ಹೇಳಿಸಿಕೊಳ್ಳಬೇಕಾದ ಅಗತ್ಯ ನಮಗಿಲ್ಲ ಎಂದಿದ್ದಾರೆ.

ನಳಿನ್ ಕುಮಾರ್ ಕಟೀಲ್ ಒಬ್ಬ ಕಾಡು ಮನುಷ್ಯ ಎಂದಿದ್ದ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿರುವ ಕಟೀಲ್, ಮೊದಲು ಅವರು ಸಂಸ್ಕಾರ ಮತ್ತು ಸಂಸ್ಕೃತಿ ಇಟ್ಟುಕೊಂಡು ಮಾತನಾಡುವುದನ್ನು ಕಲಿಯಬೇಕು ಎಂದಿದ್ದಾರೆ.
Published by: Sushma Chakre
First published: October 24, 2020, 1:13 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading