ಕೊಡಗಿನಲ್ಲಿ ಲಾಕ್‍ಡೌನ್ ಮಾಡಲ್ಲ;ಹೊರ ಜಿಲ್ಲೆ, ರಾಜ್ಯ ಮತ್ತು ದೇಶದಿಂದ ಬಂದವರಿಗೆ ಕ್ವಾರಂಟೈನ್ ಕಡ್ಡಾಯ 

ಜಿಲ್ಲೆಗೆ ಹೊರ ಜಿಲ್ಲೆಗಳಿಂದ ಮತ್ತು ಹೊರ ರಾಜ್ಯ, ದೇಶಗಳಿಂದ ಕೊಡಗಿಗೆ ಬರುವವರಿಂದ ಕೊವಿಡ್ ವೈರಸ್ ಹರಡುತ್ತಿದೆ. ಆದ್ದರಿಂದ ಹೊರ ಜಿಲ್ಲೆಗಳಿಂದ ಬರುವವರಿಗೆ ಕಡ್ಡಾಯವಾಗಿ 7 ದಿನ ಹೋಂ ಕ್ವಾರಂಟೈನ್ ಮಾಡಲಾಗುತ್ತಿದೆ.

news18-kannada
Updated:July 14, 2020, 5:15 PM IST
ಕೊಡಗಿನಲ್ಲಿ ಲಾಕ್‍ಡೌನ್ ಮಾಡಲ್ಲ;ಹೊರ ಜಿಲ್ಲೆ, ರಾಜ್ಯ ಮತ್ತು ದೇಶದಿಂದ ಬಂದವರಿಗೆ ಕ್ವಾರಂಟೈನ್ ಕಡ್ಡಾಯ 
ಸಾಂದರ್ಭಿಕ ಚಿತ್ರ
  • Share this:
ಕೊಡಗು(ಜು.14): ಕೊಡಗು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪಾಸಿಟಿವ್ ಕೇಸುಗಳು ಮಿತಿ ಮೀರುತ್ತಲೇ ಇವೆ. ಕಳೆದ ಒಂದು ವಾರದ ಹಿಂದೆ ಜಿಲ್ಲೆಯಲ್ಲಿ ಎರಡಂಕಿಯನ್ನು ದಾಟದ ಮಹಾಮಾರಿ ಏಳು ದಿನ ಎನ್ನುವಷ್ಟರಲ್ಲೇ ಇನ್ನೂರರ ಗಡಿಯನ್ನು ದಾಟಿದೆ. ಹೀಗಾಗಿ ಕೊಡಗು ಜಿಲ್ಲೆಯಲ್ಲಿ ಲಾಕ್‍ಡೌನ್ ಮಾಡಬೇಕು ಎನ್ನುವ ಕೂಗು ಕೇಳಿ ಬಂದಿತ್ತು.

ನಾಲ್ಕು ದಿನಗಳ ಹಿಂದೆಯಷ್ಟೇ ಜಿಲ್ಲೆಯ ಶಾಸಕರು ಪರಿಷತ್ ಸದಸ್ಯರು ಲಾಕ್‍ಡೌನ್ ಮಾಡಿದರೆ ಉತ್ತಮ ಎಂದು ಉಸ್ತುವಾರಿ ಸಚಿವರ ಮೂಲಕ ಸರ್ಕಾರವನ್ನು ಒತ್ತಾಯಿಸಿದ್ದರು. ಆದರೆ ಜಿಲ್ಲಾಧಿಕಾರಿ ಮಾತ್ರ ಯಾವುದೇ ಕಾರಣಕ್ಕೂ ಜಿಲ್ಲೆಯಲ್ಲಿ ಲಾಕ್‍ಡೌನ್ ಮಾಡುವುದಿಲ್ಲ. ಅಷ್ಟಕ್ಕೂ ಲಾಕ್‍ಡೌನ್ ಮಾಡಿದರೆ, ಕೊರೋನಾ ನಿಯಂತ್ರಣಕ್ಕೆ ಬರುವುದಿಲ್ಲ. ಲಾಕ್‍ಡೌನ್ ಮಾಡಿ ಮತ್ತೆ ಓಪನ್ ಮಾಡಿದಾಗ ಸಹಜವಾಗಿಯೇ ವೈರಸ್ ಹರಡಿಯೇ ಹರಡುತ್ತದೆ.

ಜೊತೆಗೆ ಮುಖ್ಯವಾಗಿ ಲಾಕ್ ಡೌನ್ ಮಾಡಿದರೆ ಬಡವರು, ಮಧ್ಯಮ ವರ್ಗದ ಜನರು ತೀವ್ರ ಸಮಸ್ಯೆ ಅನುಭವಿಸಲಿದ್ದಾರೆ. ಹೀಗಾಗಿ ಲಾಕ್ ಡೌನ್ ಮಾಡುವುದಿಲ್ಲ. ಬದಲಾಗಿ ಜಿಲ್ಲೆಗೆ ಹೊರ ಜಿಲ್ಲೆಗಳಿಂದ ಮತ್ತು ಹೊರ ರಾಜ್ಯ, ದೇಶಗಳಿಂದ ಕೊಡಗಿಗೆ ಬರುವವರಿಂದ ಕೊವಿಡ್ ವೈರಸ್ ಹರಡುತ್ತಿದೆ. ಆದ್ದರಿಂದ ಹೊರ ಜಿಲ್ಲೆಗಳಿಂದ ಬರುವವರಿಗೆ ಕಡ್ಡಾಯವಾಗಿ 7 ದಿನ ಹೋಂ ಕ್ವಾರಂಟೈನ್ ಮಾಡಲಾಗುತ್ತಿದೆ.

ತರಕಾರಿ ವ್ಯಾಪಾರಿಯ ಮಗಳ ಸಾಧನೆ; ವಿಜ್ಞಾನ ವಿಭಾಗದಲ್ಲಿ ಶೇ. 94.5 ಪಡೆದ ಹುಕ್ಕೇರಿ ವಿದ್ಯಾರ್ಥಿನಿ

ಹೊರ ರಾಜ್ಯ ಮತ್ತು ಹೊರದೇಶಗಳಿಂದ ಬರುತ್ತಿವವರಿಗೆ 14 ದಿನಗಳ ಕಾಲ ಹೋಂ ಕ್ವಾರಂಟೈನ್ ಮಾಡುತ್ತಿದೆ. ಇವರಿಗೆ ಕೈಗೆ ಸೀಲು ಹಾಕಲಾಗುತ್ತಿದ್ದು, ಅಂತಹವರು ಯಾವುದೇ ಕಾರಣಕ್ಕೂ ಹೊರಬರಬಾರದು.  ಕೋವಿಡ್ ಲಕ್ಷಣಗಳಿರುವವರು ಹೊರಗೆ ಓಡಾಡುವ ಬದಲು ತಪ್ಪದೆ ಆಸ್ಪತ್ರೆಗೆ ಹೋಗಿ ಪರಿಶೀಲಿಸಿಕೊಳ್ಳಬೇಕು. ಜನರು ಕೂಡ ಗುಂಪುಗೂಡುವುದನ್ನು ನಿಯಂತ್ರಿಸಬೇಕು ಎಂದಿದ್ದಾರೆ.

ಇನ್ನು ಸಂಜೆ 6 ರಿಂದ ಬೆಳಿಗ್ಗೆ 6 ವರೆಗೆ ಜಿಲ್ಲೆಯಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದ್ದು, ಶನಿವಾರ ಮತ್ತು ಭಾನುವಾರ ಸಂಪೂರ್ಣ ಲಾಕ್ ಡೌನ್ ಮಾಡಲಾಗುವುದು ಎಂದಿದ್ದಾರೆ.
Published by: Latha CG
First published: July 14, 2020, 5:15 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading