ಮೋದಿ ಜೊತೆಗಿನ ಭೇಟಿಯನ್ನು ಕುರ್ಚಿ ಉಳಿಸಿಕೊಳ್ಳಲು ಬಳಸಿಕೊಳ್ಳಬೇಡಿ; ಸಿಎಂ ಯಡಿಯೂರಪ್ಪಗೆ ಸಿದ್ದರಾಮಯ್ಯ ಸಲಹೆ

ರಾಷ್ಟ್ರೀಯ ನಾಯಕರ ಭೇಟಿ ಪ್ರಯುಕ್ತ ದಿಲ್ಲಿಗೆ ತೆರಳಿರುವ ಸಿಎಂ ಬಿಎಸ್ ಯಡಿಯೂರಪ್ಪ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ  ಮಾತುಕತೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ  ವೈಯಕ್ತಿಕ  ಅಭಿಲಾಷೆ ಮರೆತು, ರಾಜ್ಯದ ಹಿತದೃಷ್ಟಿಯ ಕುರಿತು ಮಾತನಾಡಿ ಎಂದು  ಸಿದ್ದರಾಮಯ್ಯ ಸರಣಿ ಟ್ವೀಟ್ ಮೂಲಕ ಸಿಎಂಗೆ ಸಲಹೆ ನೀಡಿದ್ದಾರೆ.

news18-kannada
Updated:September 18, 2020, 12:43 PM IST
ಮೋದಿ ಜೊತೆಗಿನ ಭೇಟಿಯನ್ನು ಕುರ್ಚಿ ಉಳಿಸಿಕೊಳ್ಳಲು ಬಳಸಿಕೊಳ್ಳಬೇಡಿ; ಸಿಎಂ ಯಡಿಯೂರಪ್ಪಗೆ ಸಿದ್ದರಾಮಯ್ಯ ಸಲಹೆ
ಸಿದ್ದರಾಮಯ್ಯ.
  • Share this:
ಬೆಂಗಳೂರು(ಸೆ.18): ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪನವರು 3 ದಿನಗಳ ದೆಹಲಿ ಪ್ರವಾಸದಲ್ಲಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಕುರಿತು ರಾಷ್ಟ್ರ ನಾಯಕರೊಂದಿಗೆ ಚರ್ಚಿಸಲು ದೆಹಲಿಗೆ ತೆರಳಿದ್ದಾರೆ ಎನ್ನಲಾಗಿದೆ. ಈ ಕುರಿತು ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಎಸ್​ವೈ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಟ್ವೀಟ್ ಮಾಡಿರುವ ಸಿದ್ದರಾಮಯ್ಯ ರಾಜಕೀಯ ಬಿಟ್ಟು, ರಾಜ್ಯದ ಹಿತ ಕಾಯುವಂತೆ ದೆಹಲಿ  ಪ್ರವಾಸದಲ್ಲಿರುವ ಸಿಎಂ ಬಿಎಸ್​ ಯಡಿಯೂರಪ್ಪನವರಿಗೆ ಒತ್ತಾಯಿಸಿದ್ದಾರೆ.  ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ನಿಮ್ಮ ಕುರ್ಚಿ ಉಳಿಸಿಕೊಳ್ಳುವ ಪ್ರಯತ್ನ ಮಾಡುವ ಬದಲು, ರಾಜ್ಯದ ಹಿತರಕ್ಷಣೆಗೆ ಅಗತ್ಯ ಮಾತುಗಳನ್ನಾಡಿ ಎಂದು ಸಿಎಂ ಬಿಎಸ್ ಯಡಿಯೂರಪ್ಪಗೆ ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ರಾಷ್ಟ್ರೀಯ ನಾಯಕರ ಭೇಟಿ ಪ್ರಯುಕ್ತ ದಿಲ್ಲಿಗೆ ತೆರಳಿರುವ ಸಿಎಂ ಬಿಎಸ್ ಯಡಿಯೂರಪ್ಪ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ  ಮಾತುಕತೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ  ವೈಯಕ್ತಿಕ  ಅಭಿಲಾಷೆ ಮರೆತು, ರಾಜ್ಯದ ಹಿತದೃಷ್ಟಿಯ ಕುರಿತು ಮಾತನಾಡಿ ಎಂದು  ಸಿದ್ದರಾಮಯ್ಯ ಸರಣಿ ಟ್ವೀಟ್ ಮೂಲಕ ಸಿಎಂಗೆ ಸಲಹೆ ನೀಡಿದ್ದಾರೆ.

ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರೇ, ಕಾಡಿ ಬೇಡಿ ಕೊನೆಗೂ ಪ್ರಧಾನಿ ನರೇಂದ್ರ ಮೋದಿ ಭೇಟಿಗೆ ಅವಕಾಶ ಪಡೆದಿದ್ದೀರಿ. ಈ ಅವಕಾಶವನ್ನು ನಿಮ್ಮ ಕುರ್ಚಿ ಉಳಿಸಿಕೊಳ್ಳುವ ಕಸರತ್ತಿಗೆ ಬಳಸಿಕೊಳ್ಳದೆ, ರಾಜ್ಯದ ಹಿತರಕ್ಷಣೆಗಾಗಿ ನಾಲ್ಕು ಮಾತುಗಳನ್ನು ಖಡಕ್ ಆಗಿ ಕೇಳಲು ಬಳಸಿಕೊಳ್ಳಿ. ರಾಜ್ಯದ ಜನ ನಿಮ್ಮ ಬೆನ್ನ ಹಿಂದಿದ್ದಾರೆ ಎಂದು ಹೇಳಿದ್ದಾರೆ.

ಸೆ. 21ರಿಂದ ಕೇವಲ ಶಾಲೆಗಳು ತೆರೆಯಲಿವೆ, ಆದ್ರೆ ತರಗತಿ ಪ್ರಾರಂಭ ಇಲ್ಲ; ಸಚಿವ ಸುರೇಶ್​ ಕುಮಾರ್





ಮುಖ್ಯಮಂತ್ರಿ ಅವರೇ, ಕಳೆದ ವರ್ಷದ ಅತಿವೃಷ್ಟಿಗೆ ರೂ.35000 ಕೋಟಿ ಪರಿಹಾರ ಕೇಳಿದ್ದೀರಿ,‌ ಪ್ರಧಾನಮಂತ್ರಿ ನೀಡಿದ್ದು ಕೇವಲ ರೂ.1,869 ಕೋಟಿ‌. ಈ ಬಾರಿ  ರೂ.8000 ಕೋಟಿ ನಷ್ಟವಾಗಿದೆ ಎಂದು ಹೇಳುತ್ತಿದ್ದೀರಿ. ಕಳೆದ ವರ್ಷದ ಬಾಕಿ ಜೊತೆ ಈ ವರ್ಷದ ಪರಿಹಾರವನ್ನು ಉದಾರವಾಗಿ ಕೊಡುವಂತೆ ಕೇಳಿಕೊಳ್ಳಿ ಎಂದಿದ್ದಾರೆ.



ರಾಜ್ಯಕ್ಕೆ ನಷ್ಟ

15ನೇ ಹಣಕಾಸು ಆಯೋಗದಿಂದ ಉಳಿದ ರಾಜ್ಯಗಳಿಗೆ ಹೋಲಿಸಿದರೆ ಹೆಚ್ಚು ನಷ್ಟವಾಗಿರುವುದು ಕರ್ನಾಟಕ ರಾಜ್ಯಕ್ಕೆ. ಈ ಅನ್ಯಾಯಕ್ಕೆ ಕಾರಣವಾಗಿರುವ  ಮಾನದಂಡಗಳನ್ನು ಪರಿಷ್ಕರಿಸಿ ತೆರಿಗೆ ಹಂಚಿಕೆ ಮತ್ತು ಎಸ್ ಡಿ ಆರ್ ಎಫ್ ನಲ್ಲಿ ರಾಜ್ಯಕ್ಕೆ ನ್ಯಾಯಬದ್ದ ಪಾಲು ಸಿಗುವಂತೆ ಮಾಡಿ ಎಂದು ಸಿಎಂಗೆ ತಿಳಿಸಿದ್ದಾರೆ.



ಕೊರಓನಾ ಸೋಂಕಿನಲ್ಲಿ ವಿಶ್ವದಲ್ಲಿ ಭಾರತ, ದೇಶದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಗೆಲುವಿನ ಕಿರೀಟಗಳನ್ನೆಲ್ಲ ಮುಡಿಗೇರಿಸುವ  ಪ್ರಧಾನಿ ನರೇಂದ್ರ ಮೋದಿಗೆ ವೈಫಲ್ಯಗಳ ಹೊಣೆಯನ್ನು ರಾಜ್ಯಗಳ ಹೆಗಲ ಕಡೆ ಜಾರಿಸುವ ಚಾಳಿ ಇದೆ. ಪ್ರಧಾನಿ ಅವರಿಗೆ ಜವಾಬ್ದಾರಿ ನೆನಪಿಸಿ ರಾಜ್ಯಕ್ಕೆ ನ್ಯಾಯ ಕೊಡಿಸಿ ಎಂದು ಖಡಕ್ಕಾಗಿ ತಿಳಿಸಿದ್ದಾರೆ.



ರಾಜ್ಯದ ಬೇಡಿಕೆ ಪೂರೈಸಿಲ್ಲ

ಕೊರೋನಾ ನಿಯಂತ್ರಣದ ಸಾಮಗ್ರಿ ಖರೀದಿಯನ್ನು ಕೇಂದ್ರೀಕೃತಗೊಳಿಸಿರುವ ಪ್ರಧಾನ ಮಂತ್ರಿಗಳು ಕರ್ನಾಟಕದ ಬೇಡಿಕೆಯನ್ನು ಶೇಕಡಾ ಹತ್ತರಷ್ಟೂ ಪೂರೈಸಿಲ್ಲ. ವೆಂಟಿಲೇಟರ್ ಮತ್ತು ಆಮ್ಲಜನಕ ಪೂರೈಕೆಯ ಸಾಧನಗಳ ಕೊರತೆಯಿಂದ ಜನ ಸಾಯುತ್ತಿರುವುದನ್ನು ಗಮನಕ್ಕೆ ತಂದು ನರೇಂದ್ರ ಮೋದಿಯವರ ಕಣ್ಣು ತೆರೆಸಿ. ಪ್ರಧಾನಿ ಘೋಷಿಸಿದ್ದ ರೂ.20 ಲಕ್ಷ ಕೋಟಿ ಪ್ಯಾಕೇಜ್ ರಾಜ್ಯದ ಜನರನ್ನು ಇನ್ನೂ ತಲುಪಿಲ್ಲ. ಕೊರೋನಾ ಸೋಂಕಿಗಿಂತ ಹಸಿವು ಮತ್ತು ನಿರುದ್ಯೋಗದಿಂದ ಹೆಚ್ಚು ಜನ ಸಾವು-ನೋವಿಗೀಡಾಗುವ ಮೊದಲು, ಪ್ಯಾಕೇಜ್ ನಲ್ಲಿ ರಾಜ್ಯಕ್ಕೆ ನ್ಯಾಯಬದ್ಧ ಪಾಲು ನೀಡಲು ಒತ್ತಾಯಿಸಿ ಎಂದು ಸಲಹೆ ನೀಡಿದ್ದಾರೆ.









ಅನ್ಯಾಯ ಸರಿಪಡಿಸಲು ಹೇಳಿ

ನ್ಯಾಯಬದ್ಧವಾಗಿ ರಾಜ್ಯಕ್ಕೆ ನೀಡಬೇಕಾಗಿರುವ ಜಿಎಸ್‌ಟಿ ಪರಿಹಾರ ರೂ.25,508 ಕೋಟಿ ನೀಡದೆ ದ್ರೋಹ ಬಗೆದಿರುವ ಕೇಂದ್ರ ಸರ್ಕಾರ ಸಾಲ ಎತ್ತಲು ರಾಜ್ಯದ ಮುಖ್ಯಮಂತ್ರಿಗಳಿಗೆ ಕೈಗೆ ಭಿಕ್ಷಾಪಾತ್ರೆ ನೀಡಿದೆ.



ಬಿಎಸ್ ಯಡಿಯೂರಪ್ಪ ಅವರೇ, ನಿಮ್ಮ ನಾಯಕರ ಎದೆಯಳತೆಯ ಮುಂದೆ ಮಣಿಯದೆ ಧೈರ್ಯದಿಂದ ಈ ಅನ್ಯಾಯ ಸರಿಪಡಿಸಲು ಹೇಳಿ ಎಂದಿದ್ದಾರೆ.
Published by: Latha CG
First published: September 18, 2020, 12:43 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading