ಪ್ರತಿಭಟನೆ ಹಿಂಪಡೆದ ಶಿವಮೊಗ್ಗ ಮೆಡಿಕಲ್ ಕಾಲೇಜಿನ ಹೊರಗುತ್ತಿಗೆ ಸಿಬ್ಬಂದಿ; ನಾಳೆಯಿಂದ ಕರ್ತವ್ಯಕ್ಕೆ ಹಾಜರು

ಪ್ರಸ್ತುತ ಮೆಗ್ಗಾನ್ ಆಸ್ಪತ್ರೆಯಲ್ಲಿ 111 ಮಂದಿ ಸೆಕ್ಯೂರಿಟಿ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದು, ಅವರನ್ನು ಇನ್ನು ಮುಂದೆ ಹಂತ ಹಂತವಾಗಿ ಹೋಂಗಾರ್ಡ್ ಅಡಿಯಲ್ಲಿ ಸೇವೆಗೆ ತೆಗೆದುಕೊಳ್ಳಬೇಕು.

news18-kannada
Updated:October 1, 2020, 3:23 PM IST
ಪ್ರತಿಭಟನೆ ಹಿಂಪಡೆದ ಶಿವಮೊಗ್ಗ ಮೆಡಿಕಲ್ ಕಾಲೇಜಿನ ಹೊರಗುತ್ತಿಗೆ ಸಿಬ್ಬಂದಿ; ನಾಳೆಯಿಂದ ಕರ್ತವ್ಯಕ್ಕೆ ಹಾಜರು
ಮೆಗ್ಗಾನ್ ಆಸ್ಪತ್ರೆ
  • Share this:
ಶಿವಮೊಗ್ಗ(ಅ.01): ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಳೆದ 10 ದಿನಗಳಿಂದ ಶಿವಮೊಗ್ಗ ಮೆಡಿಕಲ್ ಕಾಲೇಜಿನ ಹೊರ ಗುತ್ತಿಗೆ ಸಿಬ್ಬಂದಿಗಳು ಪ್ರತಿಭಟನೆ ನಡೆಸುತ್ತಿದ್ದರು. ಸೇವಾ ಭದತ್ರೆ, ಸಮಾನ ಕೆಲಸ ಸಮಾನ ವೇತನ,  ಸೇರಿದಂತೆ ಹಲವು ಬೇಡಿಕೆ ಮುಂದಿಟ್ಟು ಪ್ರತಿಭಟನಾ ಧರಣಿ ನಡೆಸುತ್ತಿದ್ದರು. ಪ್ರತಿಭಟನಾ ನಿರತ ಹೊರಗುತ್ತಿಗೆ ನೌಕರರನ್ನು  ಮನವೊಲಿಸುವಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರಪ್ಪ ಯಶಸ್ವಿಯಾಗಿದ್ದಾರೆ. ಮೆಗ್ಗಾನ್ ಭೋದನಾ ಆಸ್ಪತ್ರೆಯಲ್ಲಿ ಕೆಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದ ಮೆಗ್ಗಾನ್ ಆಸ್ಪತ್ರೆಯ ಹೊರಗುತ್ತಿಗೆ ಸಿಬ್ಬಂದಿಗಳು ನಾಳೆಯಿಂದ ಸೇವೆಗೆ ಹಾಜರಾಗಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ  ಕೆ.ಎಸ್.ಈಶ್ವರಪ್ಪ, ಇಂದು ಮೆಗ್ಗಾನ್ ಆಸ್ಪತ್ರೆಯಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಈ ವಿಷಯ ತಿಳಿಸಿದರು. ಮುಷ್ಕರದಲ್ಲಿ ಭಾಗವಹಿಸಿದ ಎಲ್ಲಾ ಸಿಬ್ಬಂದಿಗಳಿಗೂ ಮತ್ತೆ ಕರ್ತವ್ಯಕ್ಕೆ ಹಾಜರಾಗಲು ಅವಕಾಶ ಕಲ್ಪಿಸಲಾಗಿದೆ. ಹೊಸ ಗುತ್ತಿಗೆ ಸಂಸ್ಥೆಯ ಅಡಿಯಲ್ಲಿ ಇದೇ ಸಿಬ್ಬಂದಿಗಳನ್ನು ಮತ್ತೆ ಕೆಲಸಕ್ಕೆ ತೆಗೆದುಕೊಳ್ಳಲು ನಿರ್ಧರಿಸಲಾಗಿದೆ ಎಂದು ಹೇಳಿದರು. ಕೊರೋನಾ ಸಂದರ್ಭದಲ್ಲಿ ಕರ್ತವ್ಯಕ್ಕೆ ಯಾವುದೇ ಚ್ಯುತಿ ಬಾರದಂತೆ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಲು ಇದೇ ವೇಳೆ ಅವರು ಸಿಬ್ಬಂದಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಯುಪಿ ದಲಿತ ಯುವತಿ ಅತ್ಯಾಚಾರ ಪ್ರಕರಣ; ಸಿಎಂ ಆದಿತ್ಯನಾಥ್ ರಾಜೀನಾಮೆಗೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಇದಕ್ಕೂ ಮೊದಲು ಸಭೆಯಲ್ಲಿ ಮಾತನಾಡಿದ ಈಶ್ವರಪ್ಪ, ಈ ಹಿಂದಿನ ಹೊರಗುತ್ತಿಗೆ ಸಂಸ್ಥೆಯ ವಿರುದ್ಧ ಹಲವು ಆರೋಪಗಳಿವೆ. ಸಿಬ್ಬಂದಿಗಳ ನೇಮಕಕ್ಕೆ ಹಣ ಪಡೆಯುವುದು, ಗೌರವ ಧನದಲ್ಲಿ ಕಡಿತ ಮಾಡುವುದು ಇತ್ಯಾದಿ ದೂರುಗಳಿದ್ದು, ಹೊಸ ಗುತ್ತಿಗೆ ಸಂಸ್ಥೆ ಇಂತಹ ಅಕ್ರಮ ಎಸಗುವುದು ಕಂಡು ಬಂದರೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು. ಕರೋನಾದಂತಹ ಇಂತಹ ತುರ್ತು ಸಂದರ್ಭದಲ್ಲಿ ಕರ್ತವ್ಯಕ್ಕೆ ಅಡ್ಡಿಪಡಿಸುವವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಹೇಳಿದರು.

ಪ್ರಸ್ತುತ ಮೆಗ್ಗಾನ್ ಆಸ್ಪತ್ರೆಯಲ್ಲಿ 111 ಮಂದಿ ಸೆಕ್ಯೂರಿಟಿ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದು, ಅವರನ್ನು ಇನ್ನು ಮುಂದೆ ಹಂತ ಹಂತವಾಗಿ ಹೋಂಗಾರ್ಡ್ ಅಡಿಯಲ್ಲಿ ಸೇವೆಗೆ ತೆಗೆದುಕೊಳ್ಳಬೇಕು. ಇನ್ನುಳಿದಂತೆ 93 ನರ್ಸ್​​​ಗಳು, 78ಲ್ಯಾಬ್ ಅಸಿಸ್ಟೆಂಟ್, 8 ಮಂದಿ ಫಾರ್ಮಸಿಸ್ಟ್ ಮತ್ತು 183 ಸ್ವಚ್ಛತಾಗಾರರ ಸೇವೆಯನ್ನು ಹೊಸ ಗುತ್ತಿಗೆದಾರ ಸಂಸ್ಥೆಯ ಅಡಿಯಲ್ಲಿ ಮುಂದುವರೆಸಬೇಕು. ಎಲ್ಲಾ ಸಿಬ್ಬಂದಿ ಸಮರ್ಪಕವಾಗಿ ಸೇವೆ ಒದಗಿಸುವುದನ್ನು ಗುತ್ತಿಗೆದಾರ ಖಾತ್ರಿಪಡಿಸಿಕೊಳ್ಳಬೇಕು ಎಂದು ಹೇಳಿದರು.

ಇದೇ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಹೊರಗುತ್ತಿಗೆ ನೌಕರರ ಳ ಬೇಡಿಕೆಗಳನ್ನು ಈಡೇರಿಸಲು ಸರ್ಕಾರದ ಹಂತದಲ್ಲಿ ಪ್ರಯತ್ನಿಸಲಾಗುತ್ತಿದೆ. ಸರ್ಕಾರದ ನಿಯಮಾವಳಿ ಪ್ರಕಾರ ಹೊರ ಗುತ್ತಿಗೆದಾರರಿಗೆ ಸೌಲಭ್ಯಗಳನ್ನು ಒದಗಿಸಲಾಗುವುದು. ಸರಿಯಾದ ಸಮಯಕ್ಕೆ ಗೌರವಧನ ಪಾವತಿ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸಲು ಗುತ್ತಿಗೆದಾರ ಸಂಸ್ಥೆಗೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ. ಸಣ್ಣ ಪುಟ್ಟ ಸಮಸ್ಯೆಗಳಿದ್ದರೆ ನಿರ್ದೇಶಕರ ಗಮನಕ್ಕೆ ತಂದು ಬಗೆಹರಿಸಲು ಪ್ರಯತ್ನಿಸಿ ಎಂದರು.

ಸಭೆಯಲ್ಲಿ ಮೆಗ್ಗಾನ್ ನಿರ್ದೇಶಕ ಡಾ.ಸಿದ್ದಪ್ಪ, ಜಿಲ್ಲಾ ಸರ್ಜನ್ ಡಾ.ರಘುನಂದನ್,  ಅಧೀಕ್ಷಕ ಶ್ರೀಧರ್ ಉಪಸ್ಥಿತರಿದ್ದರು.
Published by: Latha CG
First published: October 1, 2020, 3:23 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading