ಚಾಮರಾಜನಗರ: ಪರಿಸರ ಸೂಕ್ಷ್ಮ ವಲಯದಲ್ಲೇ ತಲೆಯೆತ್ತಿದೆ ಸೋಲಾರ್ ವಿದ್ಯುತ್ ಉತ್ಪಾದನಾ ಘಟಕ

ಬಿಳಿಗಿರಿ ರಂಗನಬೆಟ್ಟದ ಗುಂಡಾಲ್ ಜಲಾಶಯದ ಬಳಿ ಸೂಕ್ಷ್ಮ ಪರಿಸರ ವಲಯ ವ್ಯಾಪ್ತಿಯಲ್ಲೇ  500 ಎಕರೆ ಪ್ರದೇಶದಲ್ಲಿ ಈ ಸೋಲಾರ್ ವಿದ್ಯುತ್ ಉತ್ಪಾದನಾ ಘಟಕ ಪ್ರಾರಂಭವಾಗಿದೆ.

news18-kannada
Updated:September 9, 2020, 10:04 AM IST
ಚಾಮರಾಜನಗರ: ಪರಿಸರ ಸೂಕ್ಷ್ಮ ವಲಯದಲ್ಲೇ ತಲೆಯೆತ್ತಿದೆ ಸೋಲಾರ್ ವಿದ್ಯುತ್ ಉತ್ಪಾದನಾ ಘಟಕ
ಚಾಮರಾಜನಗರದಲ್ಲಿ ಸೋಲಾರ್ ಘಟಕ
  • Share this:
ಚಾಮರಾಜನಗರ (ಸೆ. 9): ಚಾಮರಾಜನಗರ ಜಿಲ್ಲೆಯ ಬಿ.ಆರ್.ಟಿ. ಹುಲಿ ರಕ್ಷಿತಾರಣ್ಯ ಹಾಗೂ ಮಲೆಮಹದೇಶ್ವರ ಬೆಟ್ಟ ವನ್ಯಧಾಮದ ನಡುವೆ ಇರುವ ಸೂಕ್ಷ್ಮ ಪರಿಸರ ವಲಯದಲ್ಲೇ ಸೋಲಾರ್ ವಿದ್ಯುತ್ ಉತ್ಪಾದನಾ ಘಟಕ ತಲೆ ಎತ್ತಿದ್ದು, ಪ್ರಾಣಿ ಮಾನವ ಸಂಘರ್ಷಕ್ಕೆ ಎಡೆ ಮಾಡಿಕೊಡುತ್ತಿದೆ. ಬಿಳಿಗಿರಿ ರಂಗನಬೆಟ್ಟದ ಗುಂಡಾಲ್ ಜಲಾಶಯದ ಬಳಿ ಸೂಕ್ಷ್ಮ ಪರಿಸರ ವಲಯ ವ್ಯಾಪ್ತಿಯಲ್ಲೇ  500 ಎಕರೆ ಪ್ರದೇಶದಲ್ಲಿ ಈ ಸೋಲಾರ್ ವಿದ್ಯುತ್ ಉತ್ಪಾದನಾ  ಘಟಕ ಪ್ರಾರಂಭವಾಗಿದೆ. ಖಾಸಗಿ ಕಂಪನಿಯೊಂದು ರೈತರ ಜಮೀನುಗಳನ್ನು ಗುತ್ತಿಗೆ ಆಧಾರದ ಮೇಲೆ ಪಡೆದು ಇಲ್ಲಿ  ಸೋಲಾರ್ ಘಟಕ ಆರಂಭಿಸಿದೆ. ಈ  ಪ್ರದೇಶ ಬಿಳಿಗಿರಿರಂಗನ ಬೆಟ್ಟದಿಂದ ಮಲೆಮಹದೇಶ್ವರ ಬೆಟ್ಟಕ್ಕೆ ಆನೆಗಳು ಸೇರಿದಂತೆ ವನ್ಯಜೀವಿಗಳು ಮುಕ್ತವಾಗಿ ಸಂಚರಿಸುವ ಮೊಗಸಾಲೆಯಾಗಿದೆ.

ಆದರೆ, ಇಲ್ಲಿ ಸೋಲಾರ್ ವಿದ್ಯುತ್ ಉತ್ಪಾದನಾ ಘಟಕ ನಿರ್ಮಾಣವಾಗಿರುವುದರಿಂದ ಎರಡು ಅರಣ್ಯಗಳ ನಡುವೆ ಆನೆ ಸೇರಿದಂತೆ ವನ್ಯಜೀವಿಗಳ  ಮುಕ್ತ ಸಂಚಾರಕ್ಕೆ ಕಡಿವಾಣ ಬಿದ್ದಿದೆ. ಈ ಹಿಂದೆ ಇದೇ ಪ್ರದೇಶದಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ವನ್ಯಜೀವಿಗಳ ಹಿತದೃಷ್ಟಿಯಿಂದ ಅದನ್ನು ಕೈಬಿಡಲಾಗಿತ್ತು. ಆದರೆ, ಇದೀಗ ಅದೇ ಪ್ರದೇಶದಲ್ಲಿ ಸೋಲಾರ್ ಉತ್ಪಾದನಾ ಘಟಕ ತಲೆ ಎತ್ತಿದ್ದರೂ ಅರಣ್ಯ ಇಲಾಖೆ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ. ಸೂಕ್ಷ್ಮ ಪರಿಸರ ವಲಯದಲ್ಲಿ ಆರಂಭವಾಗಿರುವ ಈ ಘಟಕಕ್ಕೆ ಅರಣ್ಯ ಅಧಿಕಾರಿಗಳು ಅನುಮತಿ ನೀಡಿರುವುದಕ್ಕೆ ಪರಿಸರವಾದಿಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಸೂಕ್ಷ್ಮ ಪರಿಸರ ವಲಯ ಘೋಷಣೆಗೆ ಮೊದಲೇ ಇಲ್ಲಿ ಸೋಲಾರ್ ಘಟಕ ಸ್ಥಾಪನೆಗೆ ಅನುಮತಿ ನೀಡಲಾಗಿತ್ತು. ಆದರೆ, ಸೂಕ್ಷ್ಮ ಪರಿಸರ ವಲಯ ಘೋಷಣೆ ನಂತರ ಯಾವುದೇ ಪ್ರದೇಶದಲ್ಲಿ ಇಂತಹ ಚಟುವಟಿಕೆಗಳಿಗೆ ಅನುಮತಿ ನೀಡುತ್ತಿಲ್ಲ ಎನ್ನುತ್ತಾರೆ   ಚಾಮರಾಜನಗರ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ. ಇದೇ ರೀತಿ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ವ್ಯಾಪ್ತಿಗೆ ಬರುವ ಕಾಡಂಚಿನ ಪ್ರದೇಶಗಳಲ್ಲಿ ಖಾಸಗಿ ಜಮೀನುಗಳಲ್ಲಿ ಸೋಲಾರ್ ವಿದ್ಯುತ್ ಉತ್ಪಾದನಾ ಘಟಕ ಪ್ರಾರಂಭವಾಗಿವೆ.  ಇವು ಮುಂದಿನ ದಿನಗಳಲ್ಲಿ ಕಾಡುಪ್ರಾಣಿಗಳಿಗೆ ಕಂಟಕವಾಗಲಿವೆ ಎಂಬುದು ಪರಿಸರವಾದಿಗಳ ಆತಂಕವಾಗಿವೆ.

ಎರಡು ಅರಣ್ಯಗಳ ನಡುವೆ ಪ್ರಾಣಿಗಳು ಸಂಚರಿಸುವ ಕಾರಿಡಾರ್​ಗೆ ಕುತ್ತು ಬಂದಿದೆ. ಭವಿಷ್ಯದಲ್ಲಿ ಜೀವ ವೈವಿಧ್ಯತೆಗೂ ಧಕ್ಕೆ ಉಂಟಾಗಲಿದೆ. ಒಂದು ಪ್ರದೇಶದಿಂದ ಇನ್ನೊಂದು ಪ್ರದೇಶಕ್ಕೆ ಪ್ರಾಣಿಗಳು ಸಂಚರಿಸುವ ದಾರಿ ಬಂದ್ ಆಗಿರುವುದರಿಂದ ಮುಂದಿನ ದಿನಗಳಲ್ಲಿ ಕಾಡುಪ್ರಾಣಿಗಳು ಹಾಗೂ ಮನುಷ್ಯರ ನಡುವಿನ ಸಂಘರ್ಷ ಮತ್ತಷ್ಟು ಹೆಚ್ಚಾಗಲಿದೆ.
Published by: Sushma Chakre
First published: September 9, 2020, 10:04 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading